ADVERTISEMENT

 ಅಶ್ವಿನಿ ಪುನೀತ್‌ ರಾಜಕುಮಾರ್‌ ಗುಳೇದಗುಡ್ಡಕ್ಕೆ ನಾಳೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 6:08 IST
Last Updated 28 ಫೆಬ್ರುವರಿ 2026, 6:08 IST
   

ಗುಳೇದಗುಡ್ಡ: ಪುನೀತ್‌ ಶಿಕ್ಷಣ ಸಂಸ್ಥೆಯ ಪುನೀತ್‌ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ, ಪ್ರತಿಭೆಗಳ ಪ್ರಗತಿಯ ಸಡಗರ ಫೆ.28ರಂದು ಶನಿವಾರ ಸಂಜೆ 6 ಗಂಟೆಗೆ ನಡೆಯಲಿದ್ದು, ಅಶ್ವಿನಿ ಪುನೀತ್‌ ರಾಜಕುಮಾರ ಹಾಗೂ ಅವರ ಕುಟುಂಬ ವರ್ಗದವರು ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಶ್ರೀಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಹೊಳೆಹುಚ್ಚೇಶ್ವರ ಸಂಸ್ಥಾನಮಠದ ಹೊಳೆಹುಚ್ಚೇಶ್ವರ ಶ್ರೀಗಳು ಕಾರ್ಯಕ್ರಮ ಉದ್ಘಾಟಿಸುವರು.

ಅಶ್ವಿನಿ ಪುನೀತ್‌ ರಾಜಕುಮಾರ ಹಾಗೂ ಕುಟುಂಬದವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಡಿಡಿಪಿಐ ಎ.ಸಿ.ಮನ್ನಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಂ.ಪೆಟ್ಲೂರ ಮುಖ್ಯಅತಿಥಿಗಳಾಗಿ ಆಗಮಿಸುವರು. ಅತಿಥಿಗಳಾಗಿ ಎಂ.ಸಿ.ನಾಲತವಾಡ, ಭಾರತೀಯ ಪುರಾತನ ಇಲಾಖೆಯ ಎಚ್.ಆರ್.ದೇಸಾಯಿ, ಎಮ್.ಎಸ್.ಬಿಜಾಪೂರ ಆಗಮಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.