ADVERTISEMENT

ಅವಲಕ್ಕಿಯಲ್ಲಿ ಜಿರಳೆ ವಿಡಿಯೊ ವೈರಲ್

ಆಹಾರ ಪೂರೈಕೆ ಹೊಣೆ ಖಾಸಗಿಯವರಿಗೆ ವಹಿಸಿದ ಆಸ್ಪತ್ರೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:16 IST
Last Updated 14 ಜುಲೈ 2020, 17:16 IST

ಬಾಗಲಕೋಟೆ: ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕೊಟ್ಟ ಬೆಳಗಿನ ಉಪಾಹಾರ ಅವಲಕ್ಕಿಯಲ್ಲಿ ಜಿರಳೆ ಬಿದ್ದಿರುವ ಇರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡು
ತ್ತಿದೆ. ರೋಗಿಗಳನ್ನು ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗಿಸಲಾಗಿದೆ ಎಂಬ ಆರೋಪವೂ ಅದರಲ್ಲಿ ಕೇಳಿಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, 'ಆಸ್ಪತ್ರೆಯಲ್ಲಿ ಒಮ್ಮೆಲೆ ರೋಗಿಗಳ ಸಂಖ್ಯೆ ಹೆಚ್ಚಾದ ಪರಿಣಾಮ ಅಡುಗೆ ಕೋಣೆಯ ಸಾಮರ್ಥ್ಯಕ್ಕಿಂತ ಹೆಚ್ಚು ರೋಗಿಗಳಿಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಗಡಿಬಿಡಿಯಲ್ಲಿ ಜಿರಳೆ ಬಿದಿದ್ದೆ. ಅದು ಗಮನಕ್ಕೆ ಬರುತ್ತಿದ್ದಂತೆಯೇ ಬದಲಾಯಿಸಲಾಯಿತು. ಈಗ ರೋಗಿಗಳಿಗೆ ಆಹಾರ ಪೂರೈಕೆ ಹೊಣೆಯನ್ನು ಖಾಸಗಿಯವರಿಗೆ ವಹಿಸಿದ್ದೇವೆ ಎಂದು ತಿಳಿಸಿದರು.

ಈಗ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರೋಗಿಗಳಿಗೆ ಊಟೋಪಹಾರದ ಜೊತೆಗೆ ಕಷಾಯ, ಹಣ್ಣು, ಸೂಪ್, ಗಂಜಿ, ಮೊಟ್ಟೆ, ಮೊಸರು ಕೊಡಲಾಗುತ್ತಿದೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ರೋಗಿಗಳನ್ನು ನೆಲದ ಮೇಲೆ ಮಲಗಿಸಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರ. ಎಲ್ಲರಿಗೂ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.