ADVERTISEMENT

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಿ: ಡಾ.ಸಿದ್ದನಗೌಡ ಪಾಟೀಲ್

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 4:07 IST
Last Updated 30 ಡಿಸೆಂಬರ್ 2025, 4:07 IST
ಇಳಕಲ್ ವಿಜಯ ಮಹಾಂತೇಶ ಆಯುರ್ವೇದ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಸಂಸ್ಕಾರ’ವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಚೇರಮನ್ ಡಾ.ಸಿದ್ದನಗೌಡ ಪಾಟೀಲ್ ಉದ್ಘಾಟಿಸಿದರು
ಇಳಕಲ್ ವಿಜಯ ಮಹಾಂತೇಶ ಆಯುರ್ವೇದ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಸಂಸ್ಕಾರ’ವನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಚೇರಮನ್ ಡಾ.ಸಿದ್ದನಗೌಡ ಪಾಟೀಲ್ ಉದ್ಘಾಟಿಸಿದರು   

ಇಳಕಲ್: ‘ವಿದ್ಯಾರ್ಥಿಗಳು ಸಮಯ, ಆರೋಗ್ಯ ಹಾಗೂ ಕೌಶಲಾಭಿವೃದ್ಧಿಗೆ ಆದ್ಯತೆ ನೀಡಬೇಕು. ಶಿಸ್ತು, ಸಂಯಮ ಬೆಳೆಸಿಕೊಂಡು ಅಧ್ಯಯನ ಶೀಲರಾಗಬೇಕು’ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ನಾತಕೋತ್ತರ ವಿಭಾಗದ ಚೇರಮನ್ ಡಾ.ಸಿದ್ದನಗೌಡ ಪಾಟೀಲ್ ಹೇಳಿದರು.

ಅವರು ನಗರದ ವಿಜಯ ಮಹಾಂತೇಶ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕೋತ್ತರ ವಿಭಾಗ ಮತ್ತು ಆರ್.ಪಿ. ಕರಡಿ ಆಯುರ್ವೇದ ಆಸ್ಪತ್ರೆಯ ಸಹಯೋಗದಲ್ಲಿ ಎಂ.ಡಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಯುರ್ವೇದ ಕಾಲೇಜಿನ ಚೇರಮನ್ ಎಂ.ಜಿ. ಪಟ್ಟಣಶೆಟ್ಟರ್ ಮಾತನಾಡಿದರು.

ADVERTISEMENT

ಅತಿಥಿಗಳಾಗಿ ಸಂಘದ ಉಪಾಧ್ಯಕ್ಷ ಸಿ. ಪಿ. ಸಾಲಿಮಠ, ಸಂಘದ ವೈಸ್ ಚೇರಮನ್ ಅರುಣ ಬಿಜ್ಜಲ್, ಪ್ರಧಾನ ಕಾರ್ಯದರ್ಶಿ ದಿಲೀಪ ದೇವಗಿರಿಕರ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಕಿರಣ ಬಿಜ್ಜಲ್, ನಾಗಪ್ಪ ಕನ್ನೂರ, ಪಿಜಿ ಡೀನ್ ಡಾ.ಆಸ್ಮಾ, ವಿದ್ಯಾರ್ಥಿ ಒಕ್ಕೂಟದ ಚೇರಮನ್ ಸಿ. ಎಂ. ಬುದ್ನಿ ಉಪಸ್ಥಿತರಿದ್ದರು.

ಪ್ರಾಚಾರ್ಯ ಡಾ.ಕೆ.ಸಿ. ದಾಸ್ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರೋಹಿತ್ ಹಾಗೂ ಸುಯಶ್ ಮತ್ತು ವಿದ್ಯಾ ಕಾಲೇಜಿನ ಕುರಿತು, ತಮ್ಮ ವ್ಯಾಸಂಗದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.