ADVERTISEMENT

ಬಾದಾಮಿಯಲ್ಲಿ ಗಣೇಶೋತ್ಸವ: ಡಿಜೆ ನಿಷೇಧ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 4:29 IST
Last Updated 14 ಆಗಸ್ಟ್ 2025, 4:29 IST
<div class="paragraphs"><p>ಬಾದಾಮಿಯಲ್ಲಿ ಗಣೇಶೋತ್ಸವ ಹಬ್ಬದ ಅಂಗವಾಗಿ ನಡೆದ ಪೂರ್ವಭಾವಿ ಶಾಂತಿ ಸಭೆಯಲ್ಲಿ ತಹಶೀಲ್ದಾರ್ ಕಾವ್ಯಶ್ರೀ ಎಚ್. ಮಾತನಾಡಿದರು.</p></div>

ಬಾದಾಮಿಯಲ್ಲಿ ಗಣೇಶೋತ್ಸವ ಹಬ್ಬದ ಅಂಗವಾಗಿ ನಡೆದ ಪೂರ್ವಭಾವಿ ಶಾಂತಿ ಸಭೆಯಲ್ಲಿ ತಹಶೀಲ್ದಾರ್ ಕಾವ್ಯಶ್ರೀ ಎಚ್. ಮಾತನಾಡಿದರು.

   

ಬಾದಾಮಿ: ‘ಚಾಲುಕ್ಯರ ಪಟ್ಟಣ ಯಾವಾಗಲು ಸೌಹಾರ್ದದ ಶಾಂತಿಯ ನಾಡಾಗಿದೆ. ಹಬ್ಬದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಸಂಭ್ರಮದಿಂದ ಆಚರಿಸಿ’ ಎಂದು ತಹಶೀಲ್ದಾರ್ ಕಾವ್ಯಶ್ರೀ ಎಚ್. ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ಗಣೇಶೋತ್ಸವದ ಅಂಗವಾಗಿ ಪೊಲೀಸ್ ಇಲಾಖೆ ಹಮ್ಮಿಕೊಂಡ ಪೂರ್ವಭಾವಿ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

‘ಮೆರವಣಿಗೆಯಲ್ಲಿ ಏನಾದರೂ ಗಲಭೆ ಗದ್ದಲ ಉಂಟಾದರೆ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಕೊಳ್ಳುವುದು. ಗಲಭೆಗೆ ಅವಕಾಶ ಕೊಡದೆ ಶಾಂತಿಯಿಂದ ಹಬ್ಬವನ್ನು ಆಚರಿಸಿ. ಪೊಲೀಸ್ ಇಲಾಖೆಯ ಜೊತೆಗೆ ಸಹಕರಿಸಿ ’ ಎಂದು ತಿಳಿಸಿದರು.

‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಿಯಿದ ಮೆರವಣಿಗೆಯಲ್ಲಿ ಡಿಜೆ ಬಳಸುವಂತಿಲ್ಲ. ಬಳಸಿದರೆ ಪ್ರಕರಣ ದಾಖಲಿಸಲಾಗುವುದು’ ಎಂದು ಡಿಎಸ್ಪಿ ವಿಶ್ವನಾಥ ಕುಲಕರ್ಣಿ ಎಚ್ಚರಿಕೆ ನೀಡಿದರು.

‘ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಘ ಸಂಸ್ಥೆಗಳಿಂದ ಸಾವಿರಕ್ಕೂ ಅಧಿಕ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಾಗುತ್ತವೆ. ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಕೊರತೆ ಇದೆ. ಗಜಾನನ ಸಮಿತಿ ಸದಸ್ಯರು ಪೊಲೀಸರ ಜೊತೆಗೆ ಸಹಕರಿಸಬೇಕು’ ಎಂದು ಸಿಪಿಐ ಕರಿಯಪ್ಪ ಬನ್ನೆ ಹೇಳಿದರು.

‘ಪಿಒಪಿ ಗಣಪತಿ ಮಾರಾಟ ನಿಷೇಧಿಸಲಾಗಿದೆ. ಮಣ್ಣಿನ ಗಣಪತಿಯನ್ನು ಮಾರಾಟ ಮಾಡಬೇಕು. ಗಣೇಶನ ಪ್ರತಿಷ್ಠಾಪನೆ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುವಂತಿಲ್ಲ. ರಾತ್ರಿ 10 ಕ್ಕೆ ಧ್ವನಿವರ್ಧಕ ಬಂದ್ ಮಾಡಬೇಕು’ ಎಂದು ಪಿಎಸ್ಐ ಹನುಮಂತ ನೇರಳೆ ಹೇಳಿದರು.

ಪ್ರೊಬೆಷನರಿ ಪಿಎಸ್ಐ ಮಂಜುನಾಥಗೌಡ, ಕೆಇಬಿ ಅಧಿಕಾರಿ ಬಿ.ಎಸ್.ಗುರಿಕಾರ, ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಅಶೋಕ ಕೋರಿ, ಅಗ್ನಿಶಾಮಕ, ಪುರಸಭೆ ಅಧಿಕಾರಿಗಳು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಗಣೇಶ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.