ADVERTISEMENT

ರಬಕವಿ–ಬನಹಟ್ಟಿ | 'ಬಿಜೆಪಿಯಿಂದ ತಿರಂಗಾ ಮೆರವಣಿಗೆ 16ರಂದು'

​ಪ್ರಜಾವಾಣಿ ವಾರ್ತೆ
Published 13 ಮೇ 2025, 15:44 IST
Last Updated 13 ಮೇ 2025, 15:44 IST
ರಬಕವಿ ಬನಹಟ್ಟಿಯಲ್ಲಿ ಹಮ್ಮಿಕೊಳ್ಳಲಾಗುವ ತಿರಂಗಾ ಮೆರವಣಿಗೆಯ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು.
ರಬಕವಿ ಬನಹಟ್ಟಿಯಲ್ಲಿ ಹಮ್ಮಿಕೊಳ್ಳಲಾಗುವ ತಿರಂಗಾ ಮೆರವಣಿಗೆಯ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು.   

ರಬಕವಿ–ಬನಹಟ್ಟಿ: ಇದೇ 16 ರಂದು ಮಧ್ಯಾಹ್ನ ನಾಲ್ಕು ಗಂಟೆಗೆ ನಗರದಲ್ಲಿ ತಿರಂಗಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಪ್ರತಿಯೊಬ್ಬ ಭಾರತೀಯ ಭಾಗವಹಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಮಂಗಳವಾರ ಇಲ್ಲಿನ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪೂರ್ವಭಾವಿಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯಕ್ಕೆ ಭಾರತ ಸರ್ಕಾರ ಮತ್ತು ನಮ್ಮ ಸೈನಿಕರು ಉಗ್ರರಿಗೆ ಮತ್ತು ಉಗ್ರರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನ ದೇಶಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ. ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಿರಂಗಾ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ADVERTISEMENT

ನಗರದ ಮುಖಂಡ ಶ್ರೀಶೈಲ ಬೀಳಗಿ ತಿರಂಗಾ ಮೆರವಣಿಗೆ ಮಧ್ಯಾಹ್ನ 4 ಕ್ಕೆ ಈಶ್ವರಲಿಂಗ ಮೈದಾನದಿಂದ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತ್ತೆ ಅಲ್ಲಿಯೇ ಮುಕ್ತಾಯಗೊಳ್ಳುತ್ತದೆ ಎಂದು ತಿಳಿಸಿದರು.

ಶಿವಾನಂದ ಗಾಯಕವಾಡ, ಪರಶುರಾಮ ಬಸವ್ವಗೋಳ, ಮಹಾಲಿಂಗಪ್ಪ ಕುಳ್ಳೊಳ್ಳಿ, ಶಂಕರಗೌಡ ಪಾಟೀಲ, ಸುರೇಶ ಅಕ್ಕಿವಾಟ, ಚಂದ್ರಶೇಖರ ಆದಿಬಸಪ್ಪಗೊಳ ಸೇರಿದಂತೆ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.