ADVERTISEMENT

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ಅಧಿಕಾರಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 16:14 IST
Last Updated 1 ಅಕ್ಟೋಬರ್ 2024, 16:14 IST

ಬಾಗಲಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಕರ್ತವ್ಯಕ್ಕೆ ಹಾಜರು ಮಾಡಿಕೊಳ್ಳಲು ₹5 ಸಾವಿರ ಲಂಚ ಪಡೆಯುತ್ತಿದ್ದ ಸಹಾಯಕ ಆಡಳಿತ ಅಧಿಕಾರಿ ರಾಜಶ್ರೀ ಪೋಳ ಅವರನ್ನು ವಶಕ್ಕೆ ಪಡೆದಿದ್ದಾರೆ. 

ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್‌ ನೌಕರರಾಗಿರುವ ರಾಘವೇಂದ್ರ ಮಡಿವಾಳ ಅನಧಿಕೃತವಾಗಿ ಗೈರು ಆಗಿದ್ದರು. ನಂತರ ಮರಳಿ ಕರ್ತವ್ಯಕ್ಕೆ ಹಾಜರಾಗಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಅವರು ಅನುಮತಿ ನೀಡಿದ್ದರು.

ಕರ್ತವ್ಯಕ್ಕೆ ಹಾಜರಾಗಲು ಹೋದಾಗ ಅಲೆದಾಡಿಸಿದ ರಾಜಶ್ರೀ ಅವರು, ₹5 ಸಾವಿರ ಲಂಚ ಕೊಡಲು ಕೇಳಿದ್ದರು. ಈ ಬಗ್ಗೆ ರಾಘವೇಂದ್ರ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.