ADVERTISEMENT

ಬಾಗಲಕೋಟೆ | ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 1 ಮೇ 2024, 16:19 IST
Last Updated 1 ಮೇ 2024, 16:19 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಬಾಗಲಕೋಟೆ: ಚಾರಿತ್ರ್ಯವಧೆ ಹಾಗೂ ಧರ್ಮಗಳ ಮಧ್ಯೆ ದ್ವೇಷ ಭಾವನೆ ಕೆರಳುವಂತೆ ಮಾತನಾಡಿ ಸಾರ್ವಜನಿಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸೋಮವಾರ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಬಾಗಲಕೋಟೆಯಲ್ಲಿ ಬಹಳಷ್ಟು ಲೀಡರ್, ಗಂಡಸು, ಹೆಂಗಸು ಇದ್ದರೂ, ರಂಜಾನ್ ಆಚರಣೆ ಮಾಡುವಂತಹ ಕುಟುಂಬಕ್ಕೆ ಟಿಕೆಟ್‌ ನೀಡಿದ್ದಾರೆ ಎಂದು ಯತ್ನಾಳ ಹೇಳಿದರು’ ಎಂದು ಕಾರ್ಮಿಕ ನಿರೀಕ್ಷಕ ರಮೇಶ ಸಿಂದಗಿ ದೂರು ನೀಡಿದ್ದಾರೆ.

‘ಡಿಸಿಸಿ ಬ್ಯಾಂಕ್‌, ಬಸವೇಶ್ವರ ಬ್ಯಾಂಕ್‌, ಸಕ್ಕರೆ ಕಾರ್ಖಾನೆ ಎಲ್ಲವನ್ನೂ ಒಡೆದು ಹೋಗುತ್ತಾರೆ. ವಿಜಯಪುರದಲ್ಲೂ ಇದೇ ಕೆಲಸ ಮಾಡಿದ್ದಾರೆ. ಸಚಿವ ಶಿವಾನಂದ ಪಾಟೀಲ ಅವರ ವೈಯಕ್ತಿಕ ಚಾರಿತ್ರ್ಯಕ್ಕೆ ಧಕ್ಕೆ ಮಾಡಿ, ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವಂತೆ ದ್ವೇಷ ಭಾಷಣ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.