ರಾಂಪುರ: ಸಮೀಪದ ಶಿರೂರ ಪಟ್ಟಣದ ಇಂದಿರಾ ನಗರದಲ್ಲಿರುವ ಸುಡಗಾಡುಸಿದ್ಧರ ಸಮಾಜದ ಹುಲಿಗೆಮ್ಮದೇವಿ ಜಾತ್ರೆ ಗುರುವಾರ ಸಂಭ್ರಮದಿಂದ ಜರುಗಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ಹುಲಿಗೆಮ್ಮದೇವಿ ಮೂರ್ತಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿತು. ನಂತರ ಸಿದ್ದೇಶ್ವರ ಪ್ರೌಢಶಾಲೆಯ ಮೈದಾನದಿಂದ ದೇವಿಯ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಕುಂಭ ಹೊತ್ತ ಮಹಿಳೆಯರು, ಡೊಳ್ಳು, ಹಲಗಿ ಮೇಳದೊಂದಿಗೆ ನಡೆದ ಮೆರವಣಿಗೆಯಲ್ಲಿ ದೇವಿಯ ಕುರಿತಾದ ಜಯಘೋಷಗಳು ಮೊಳಗಿದವು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರು ಪರಸ್ಪರ ಭಂಡಾರ ಎರಚಿದರು. ದೇವಸ್ಥಾನ ತಲುಪಿದ ನಂತರ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.