ADVERTISEMENT

ಜಾಲಿಹಾಳ | ‘ಸೌಹಾರ್ದತೆಯ ಸಂದೇಶ ನೀಡಿದ ಪೈಗಂಬರ್’

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 15:34 IST
Last Updated 17 ಸೆಪ್ಟೆಂಬರ್ 2024, 15:34 IST
ಬಾದಾಮಿ ಸಮೀಪದ ಜಾಲಿಹಾಳ ಗ್ರಾಮದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಸಮಾರಂಭಕ್ಕೆ ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಚಾಲನೆ ನೀಡಿದರು
ಬಾದಾಮಿ ಸಮೀಪದ ಜಾಲಿಹಾಳ ಗ್ರಾಮದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಸಮಾರಂಭಕ್ಕೆ ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಚಾಲನೆ ನೀಡಿದರು   

ಜಾಲಿಹಾಳ (ಬಾದಾಮಿ): ‘ ಶಾಂತಿ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳ ಕುರಿತು ಪ್ರವಾದಿ ಮಹ್ಮದ್ ಪೈಗಂಬರ್ ಮನುಕುಲಕ್ಕೆ ಸೌಹಾರ್ದತೆಯ ಸಂದೇಶಗಳನ್ನು ನೀಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಬೇಕು’  ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

ಜಾಲಿಹಾಳ ಗ್ರಾಮದಲ್ಲಿ ಸೋಮವಾರ ಈದ್ ಮಿಲಾದ ಹಬ್ಬದ ಅಂಗವಾಗಿ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಸಮಾರಂಭಕ್ಕೆ ಅವರು ಚಾಲನೆ ನೀಡಿದರು.

‘ಪ್ರವಾದಿ ಮುಹಮ್ಮದ್ ಪೈಗಂಬರ್ ತತ್ವ ಸಿದ್ಧಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ADVERTISEMENT

ಅಂಜುಮನ್-ಎ-ಇಸ್ಲಾಂ ಸಮಿತಿ ಅಧ್ಯಕ್ಷ ರೆಹಮಾನ್ ತಹಶೀಲ್ದಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಂ.ಬಿ. ಬಾಗವಾನ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಪಾಟೀಲ, ಮುಕ್ತಿಫಾರೂಕ ಅಹ್ಮದ್ ಸುಕಾತಿ, ಸಿದ್ದನಗೌಡ ಪಾಟೀಲ, ಶೇಖರಗೌಡ ಪಾಟೀಲ, ಮಮತಾಜ ದೊಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.