ಬಾಗಲಕೋಟೆ: ವಿಜಯಪುರ ಜಿಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮೇ 20 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30ರವರೆಗೆ ನಿಡಗುಂದಿಯ ಬನಶಂಕರಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಶಿಕ್ಷಕರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಬಾದಾಮಿ ತಾಲ್ಲೂಕು ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಸುಭಾಷ ಕೊಳ್ಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎ ಬಿಇಡಿ, ಬಿಎಸ್ಸಿ, ಬಿಇಡಿ, ಎಂ.ಎ, ಎಂಎಸ್‌ಸಿ, ಬಿಸಿಎ, ಬಿಕಾಂ, ಎಂಕಾಂ ವಿದ್ಯಾರ್ಹತೆ ಹೊಂದಿದವರು ಮೇಳದಲ್ಲಿ ಭಾಗವಹಿಸಬಹುದು. ಅದೇ ರೀತಿ ಅಡುಗೆ ತಯಾರಕರು, ಡ್ರೈವರ್, ಆಯಾ, ವಾಚ್‌ಮನ್ ಹುದ್ದೆಗಳಿಗೂ ಅವಕಾಶವಿದೆ ಎಂದರು.
ಎಲ್ಲಾ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ಭಾವಚಿತ್ರ ಹಾಗೂ ಪರಿಚಯ ಪತ್ರ ತರಬೇಕು ಎಂದು ವಿಜಯಪುರ ಜಿಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎಸ್.ಪಾಟೀಲ ತಿಳಿಸಿದರು. ಎಂ.ಎಸ್.ಕೊಪ್ಪ, ಬಿ.ಎಂ. ಬಿರಾದಾರ, ಮುಸ್ತಾಕ ಮುಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.