ಕೆರೂರ: ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮೌಲಾನಾ ಆಜಾದ್ ಸರ್ಕಾರಿ ಆಂಗ್ಲ ಮಾಧ್ಯಮ ಮಾದರಿ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ಪಠ್ಯ ಪುಸ್ತಕ ಹಾಗೂ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಪುಸ್ತಕ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜಿ.ಪಂ ಮಾಜಿ ಸದಸ್ಯ ಡಾ.ಎಮ್ ಜಿ ಕಿತ್ತಲಿ ಮಾತನಾಡಿ, ’ಮೌಲಾನಾ ಆಜಾದ ಶಾಲೆ ಪಟ್ಟಣದ ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವರದಾನವಾಗಿದೆ’ ಎಂದು ಹೇಳಿದರು.
ಕ್ಷೇತ್ರದ ಶಾಸಕರಾದ ಬಿ ಬಿ ಚಿಮ್ಮನಕಟ್ಟಿ ಅವರ ಪರಿಶ್ರಮದಿಂದ ಪಟ್ಟಣದಲ್ಲಿ ಶಾಲೆ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಶಾಲೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಮೊದೀನಸಾಬ ಚಿಕ್ಕೂರ,ನೌವಜವಾನ ಶಿರತ ಕಮೀಟಿ ಅಧ್ಯಕ್ಷ ಮೋದಿನಸಾಬ ದೊಡಕಟ್ಟಿ,ಶಾಲೆ ಮುಖ್ಯ ಶಿಕ್ಷಕ ನಧಾಫ್,ಜಾಕೀರ ಟಂಕಸಾಲಿ,ಚಿದಾನಂದ ಅಂಕದ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.