ADVERTISEMENT

ಬಾಗಲಕೋಟೆ: ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ 1, 695 ಜನರು ಕ್ವಾರಂಟೈನ್

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 15:45 IST
Last Updated 30 ಮಾರ್ಚ್ 2020, 15:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗಲಕೋಟೆ: ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದ 1, 695 ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

ಜಿಲ್ಲೆಗೆ ಅಂದಾಜು 8, 500 ಜನರು ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದ್ದಾರೆ. ಈ ಪೈಕಿ ಜಿಲ್ಲೆಯಾದ್ಯಂತ ನಾನಾ ಪರಿಹಾರ ಕೇಂದ್ರಗಳಲ್ಲಿ 1, 695 ಜನರನ್ನು ಇರಿಸಲಾಗಿದೆ. ಪರಿಹಾರ ಕೇಂದ್ರಗಳಿಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ 11 ಹಾಸ್ಟೆಲ್‍ಗಳನ್ನು ಗುರುತಿಸಲಾಗಿದೆ. ಬಾಗಲಕೋಟೆಯ ಎಸ್‍ಸಿ, ಎಸ್‍ಟಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಹಾಸ್ಟೆಲ್, ಮುಧೋಳ, ಬೀಳಗಿ, ಹಿಪ್ಪರಗಿಯ ಮೊರಾರ್ಜಿ ವಸತಿ ಶಾಲೆಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಕೂಲಿ ಕಾರ್ಮಿಕರು, ವಲಸಿಗರು, ನಿರ್ಗತಿಕರಿಗಾಗಿ ಬಿಲ್‍ಕೆರೂರನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಹಾಸ್ಟೆಲ್, ಹುನಗುಂದದ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್, ಇಳಕಲ್‍ನ ಬಾಲಕಿಯರ ಹಾಸ್ಟೆಲ್, ಜಾಲಿಹಾಳದ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್, ಗುಳೇದಗುಡ್ಡದ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್, ರಬಕವಿ-ಬನಹಟ್ಟಿಯ ಮೆಟ್ರಿಕ್ ನಂತರದ ಹಾಸ್ಟೆಲ್‍ಗಳಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
166 ಜನರ ಮೇಲೆ ನಿಗಾ

ADVERTISEMENT

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ 166 ಜನರ ಮೇಲೆ ನಿಗಾ ವಹಿಸಲಾಗಿದೆ. ವಿದೇಶದಿಂದ ಆಗಮಿಸಿದ 154 ಜನರಿಗೆ ಏಪ್ರಿಲ್ 13ರವರೆಗೆ ಕ್ವಾರಂಟೈನ್‍ನಲ್ಲಿರಲು ತಿಳಿಸಲಾಗಿದೆ. ಈವರೆಗೆ 80 ಜನರ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದ್ದು, ಇವರ ಅವಧಿ ವಿಸ್ತರಿಸಲಾಗಿದೆ. 11 ಜನರ ರಕ್ತ, ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, 11 ಮಾದರಿಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಕಾರಿ ಕ್ಯಾ.ಡಾ.ರಾಜೇಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.