ADVERTISEMENT

ಬಾಗಲಕೋಟೆ ಉಪಚುನಾವಣೆ 2028ರ ಚುನಾವಣೆಗೆ ದಿಕ್ಸೂಚಿ–ಅರುಣ ಶಹಾಪುರ

ಉಪಚುನಾವಣೆ ಬಿಜೆಪಿ ಪೂರ್ವಭಾವಿ ಸಭೆ: ಶಹಾಪುರ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 6:06 IST
Last Updated 27 ಜನವರಿ 2026, 6:06 IST
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಬಾಗಲಕೋಟೆ ಉಪಚುನಾವಣೆ ಪೂರ್ವಭಾವಿ ಸಭೆಯಲ್ಲಿ ಉಸ್ತುವಾರಿ ಅರುಣ ಶಹಾಪುರ ಮಾತನಾಡಿದರು
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಬಾಗಲಕೋಟೆ ಉಪಚುನಾವಣೆ ಪೂರ್ವಭಾವಿ ಸಭೆಯಲ್ಲಿ ಉಸ್ತುವಾರಿ ಅರುಣ ಶಹಾಪುರ ಮಾತನಾಡಿದರು   

ಬಾಗಲಕೋಟೆ: ‘ಬಾಗಲಕೋಟೆಯ ಉಪಚುನಾವಣೆ ಗೆಲುವು ಮುಂದಿನ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ಬಾಗಲಕೋಟೆ ಉಪ ಚುನಾವಣಾ ಉಸ್ತುವಾರಿ ಅರುಣ ಶಹಾಪುರ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಬಾಗಲಕೋಟೆ ಉಪಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಅಭಿವೃದ್ಧಿ ಕೆಲಸಗಳ ಮೂಲಕ ಬಾಗಲಕೋಟೆಯನ್ನು ಬಿಜೆಪಿ ಭದ್ರಕೋಟೆಯಾಗಿಸಿಕೊಂಡಿದೆ. ಅದನ್ನು ಮತ್ತೇ ಮರುಸ್ಥಾಪಿಸುವ ಸಂಕಲ್ಪ ನಮ್ಮೆಲ್ಲರಲ್ಲಿ ಇದೆ’ ಎಂದರು.

ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಮಾತನಾಡಿ, ‘ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಕಷ್ಟು ಅವಕಾಶಗಳಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತು ಹೋಗಿದ್ದಾರೆ. ಬಾಗಲಕೋಟೆಯಲ್ಲಿ ಗೆಲುವು ಶತಸಿದ್ಧ’ ಎಂದು ಹೇಳಿದರು.

ADVERTISEMENT

ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಮಾತನಾಡಿ, ‘ಜಿಲ್ಲೆಯ ಎಲ್ಲ ನಾಯಕರೂ ಒಂದಾಗಿದ್ದೇವೆ. ಎಲ್ಲರೂ ಕೂಡಿ ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೇಲ್ಲಿಸೋಣ. ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದರು.

ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿದರು.

ಮಾಜಿ ಶಾಸಕ ವೀರಣ್ಣ ಚರಂತಿಮಠ, ಶಾಸಕ ಜಗದೀಶ ಗುಡುಗುಂಟಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ದೊಡ್ಡನಗೌಡ ಪಾಟೀಲ, ಜಿ.ಎಸ್.ನ್ಯಾಮಗೌಡ, ರಾಜಶೇಖರ ಶೀಲವಂತ, ರಾಜು ನಾಯ್ಕರ, ಮಲ್ಲಯ್ಯ ಮೂಗನೂರಮಠ, ಅಶೋಕ ಲಿಂಬಾವಳಿ, ಬಸವರಾಜ ಯಂಕಂಚಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.