
ಬಾಗಲಕೋಟೆ: ಅನುಕಂಪ, ಜನಪ್ರಿಯತೆ ಕುರಿತು ಸರ್ವೆ ಮಾಡಲಾಗುವುದು. ಎರಡನ್ನೂ ಪರಿಗಣಿಸಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಟಿಕೆಟ್‌ಗಾಗಿ ಮೇಟಿ ಕುಟುಂಬದಲ್ಲಿನ ಪೈಪೋಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಎಲ್ಲವೂ ಸರಿ ಮಾಡಲಾಗುವುದು. ಜಿಲ್ಲಾ ಅಧ್ಯಕ್ಷರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎಂದರು.
ಬಾಗಲಕೋಟೆಯಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಗಲಭೆಯಲ್ಲಿ ಯಾರೂ ಭಾಗಿಯಾಗಿರುತ್ತಾರೆ ಅವರನ್ನು ಪೊಲೀಸರು ಬಂಧಿಸಿರುತ್ತಾರೆ. ಅದರಲ್ಲಿ ಹಿಂದೂ, ಮುಸ್ಲಿಮ ಅಂತ ವ್ಯತ್ಯಾಸ ಮಾಡುವುದಿಲ್ಲ ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ವರ್ಷ ಎಂದು ಯಾರೂ ಹೇಳಿಲ್ಲ, ಎರಡೂವರ್ಷ ವರ್ಷ ಅಂತಾನೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಇರುತ್ತಾರೆ ಎಂದು ಅನಿಸುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.