ADVERTISEMENT

ಬಾಗಲಕೋಟೆ | ಬಾಲಕನ ಮೇಲೆ ಹಲ್ಲೆ; ನಾಲ್ವರ ಸೆರೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 0:04 IST
Last Updated 22 ಡಿಸೆಂಬರ್ 2025, 0:04 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬಾಗಲಕೋಟೆ: ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ನಡೆಸಿದ್ದ ಶಾಲೆ ಮುಖ್ಯಸ್ಥ, ಶಿಕ್ಷಕ ಅಕ್ಷಯ ಇಂದೋಲ್ಕರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಅಕ್ಷಯ ಇಂದೋಲ್ಕರ್, ಅವರ ಪತ್ನಿ ಮಾಲಿನಿ, ರವಿ ಮತ್ತು ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್‌ಪಿ ಗಜಾನನ ಸುತಾರ್ ನೇತೃತ್ವದ ತಂಡ  ಸ್ಥಳದ ಮಹಜರು ನಡೆಸಿದ್ದು, ಹಲ್ಲೆಗೆ ಬಳಸಿದ್ದ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿತು.

‘ಶಾಲೆಯಲ್ಲಿದ್ದ 28 ಮಕ್ಕಳನ್ನು ಪಾಲಕರ ವಶಕ್ಕೆ ಒಪ್ಪಿಸಲು ಕ್ರಮ ವಹಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ತಿಳಿಸಿದರು.

ಕ್ರಿಮಿನಲ್‌ ಪ್ರಕರಣ ದಾಖಲಿಸುತ್ತೇವೆ: ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ನಡೆಸಿದ ಶಿಕ್ಷಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಜತೆಗೆ ಮಾತನಾಡಿ, ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.