ADVERTISEMENT

Photos: ಬಾಗಲಕೋಟೆ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಬಾಗಲಕೋಟೆ ತಾಲ್ಲೂಕಿನ ಶಿರೂರಿನ ವೀರಶೈವ ಗ್ರಾಮೀಣ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಭಾನುವಾರ ಆರಂಭವಾದ ಬಾಗಲಕೋಟೆ ಜಿಲ್ಲಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ ಅವರನ್ನು ಮುಖ್ಯ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.ಕನ್ನಡ ಧ್ವಜದೊಂದಿಗೆ ಅಲಂಕೃತ ಎತ್ತಿನ ಬಂಡಿಯಲ್ಲಿ ಶಿರೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂದಿತು. ಗ್ರಾಮದಿಂದ ಒಂದು ಕಿ.ಮೀ ದೂರದ ವೀರಶೈವ ವಿದ್ಯಾವರ್ಧಕ ಸಂಘದ ಆವರಣಕ್ಕೆ ಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಕನ್ನಡಾಸಕ್ತರು, ಸ್ಥಳೀಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಜಾನಪದ ಕಲಾ ತಂಡಗಳು ಹಾಗೂ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಮೆರುಗು ತಂದವು.

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 7:43 IST
Last Updated 14 ಮಾರ್ಚ್ 2021, 7:43 IST
 ಬಾಗಲಕೋಟೆ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು
ಬಾಗಲಕೋಟೆ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು   
ಬಾಗಲಕೋಟೆ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಗಿಬಂದ ಮೆರವಣಿಗೆ
ಬಾಗಲಕೋಟೆ ಜಿಲ್ಲಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ ಅವರನ್ನು ಮುಖ್ಯ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕಲಾ ತಂಡಗಳು
ಬಾಗಲಕೋಟೆ ಜಿಲ್ಲಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ ಅವರನ್ನು ಮುಖ್ಯ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.
ಮೆರವಣಿಗೆಯಲ್ಲಿ ಹರಿದುಬಂದ ಜನಸಾಗರ
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕಲಾತಂಡಗಳು
ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ
ಧ್ವಜಾರೋಹಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.