ADVERTISEMENT

ಬಾಗಲಕೋಟೆ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮೆರವಣಿಗೆಯಲ್ಲಿ ಸಾಗಿಬಂದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 7:32 IST
Last Updated 14 ಮಾರ್ಚ್ 2021, 7:32 IST
ಬಾಗಲಕೋಟೆ ಜಿಲ್ಲಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ ಅವರನ್ನು ಮುಖ್ಯ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.
ಬಾಗಲಕೋಟೆ ಜಿಲ್ಲಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ ಅವರನ್ನು ಮುಖ್ಯ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.   

ಬಾಗಲಕೋಟೆ: ತಾಲ್ಲೂಕಿನ ಶಿರೂರಿನ ವೀರಶೈವ ಗ್ರಾಮೀಣ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಭಾನುವಾರ ಆರಂಭವಾದ ಬಾಗಲಕೋಟೆ ಜಿಲ್ಲಾ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಘಂಟಿ ಅವರನ್ನು ಮುಖ್ಯ ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.

ಕನ್ನಡ ಧ್ವಜದೊಂದಿಗೆ ಅಲಂಕೃತ ಎತ್ತಿನ ಬಂಡಿಯಲ್ಲಿ ಶಿರೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂದಿತು. ಗ್ರಾಮದಿಂದ ಒಂದು ಕಿ.ಮೀ ದೂರದ ವೀರಶೈವ ವಿದ್ಯಾವರ್ಧಕ ಸಂಘದ ಆವರಣಕ್ಕೆ ಬಂದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಕನ್ನಡಾಸಕ್ತರು, ಸ್ಥಳೀಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು. ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಜಾನಪದ ಕಲಾ ತಂಡಗಳು ಹಾಗೂ ಸ್ತಬ್ಧ ಚಿತ್ರಗಳು ಮೆರವಣಿಗೆಗೆ ಮೆರುಗು ತಂದವು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಶೈಲ ಕರಿಶಂಕರಿ ಕೂಡ ಚಕ್ಕಡಿಬಂಡಿಯಲ್ಲಿ ಸಾಗಿಬಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.