
ಬಾಗಲಕೋಟೆ: ಇಲ್ಲಿನ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಇಡಲಾಗಿದೆ ಎಂಬು ಇ–ಮೇಲ್ ಮೂಲಕ ಬೆದರಿಕೆ ಬಂದ ಹಿನ್ನಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣವನ್ನು ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಭವನಕ್ಕೆ ಐದು ಆರ್‌ಡಿಎಸ್ ಬಾಂಬ್‌ಗಳನ್ನು ಇಡಲಾಗಿದೆ. ಶೀಘ್ರದಲ್ಲಿಯೇ ಬಾಂಬ್‌ಗಳು ಸ್ಫೋಟಗೊಳ್ಳಲಿವೆ ಎಂದು 2 ಗಂಟೆಗೆ ಬಾಂಬ್‌ಗಳು ಸ್ಫೋಟಗೊಳ್ಳಲಿವೆ ಎಂದು ಎಚ್ಚರಿಸಲಾಗಿತ್ತು.
ಬಾಂಬ್ ಇಟ್ಟಿರುವ ಬಗ್ಗೆ ಇ–ಮೇಲ್ ಬಂದಿರುವ ಮಾಹಿತಿಯನ್ನು ಜಿಲ್ಲಾಧಿಕಾರಿ ಸಂಗಪ್ಪ ಅವರು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠರ ಗಮನಕ್ಕೆ ತಂದರು. ಕೂಡಲೇ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದರು. ಬಾಂಬ್ ಇಲ್ಲ ಎನ್ನುವುದು ಪರಿಶೀಲನೆ ವೇಳೆ ಗೊತ್ತಾಯಿತು.
ಜಿಲ್ಲಾಡಳಿತ ಭವನ ಆವರಣದಲ್ಲಿಯೇ ಜಿಲ್ಲಾ ಮಟ್ಟದ ಬಹುತೇಕ ಇಲಾಖೆಯ ಕಚೇರಿಗಳಿವೆ. ಜಿಲ್ಲಾ ಪಂಚಾಯಿತಿಯ ಕಚೇರಿಯೂ ಇಲ್ಲಿಯೇ ಇದೆ. ಎಲ್ಲ ಕಚೇರಿಗಳಲ್ಲಿಯೂ ತಪಾಸಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಇ–ಮೇಲ್ ವಿಳಾಸಕ್ಕೆ ಡಿ.12ರಂದೇ ಮೇಲ್ ಬಂದಿದೆ. ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳ ಕಚೇರಿಗೂ ಇಂತಹದೇ ಮೇಲ್ ಬಂದು ಪರಿಶೀಲನೆ ಮಾಡುತ್ತಿರುವುದರಿಂದ ಬಾಗಲಕೋಟೆಯಲ್ಲಿಯೂ ಬುಧವಾರ ಪರಿಶೀಲನೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.