ADVERTISEMENT

ಬಾಗಲಕೋಟೆ | ವಾಲ್ಮೀಕಿ ಸಮಾಜಕ್ಕೆ ಅನ್ಯಾಯ: ಅ.13ಕ್ಕೆ ಸಿಎಂ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 6:25 IST
Last Updated 12 ಅಕ್ಟೋಬರ್ 2025, 6:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬಾಗಲಕೋಟೆ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಕೆಲವರು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿದ್ದಾರೆ. ಇದನ್ನು ಸರ್ಕಾರ ಕೂಡಲೇ ತಡೆಯಬೇಕು. ವಾಲ್ಮೀಕಿ ಜನಾಂಗಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅ.13ಕ್ಕೆ ಬಾಗಲಕೋಟೆ ಜಿಲ್ಲೆಗೆ ಬರಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಬಾದಾಮಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ ನಾಯ್ಕರ ಹೇಳಿದರು.

ADVERTISEMENT

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಾಲ್ಮೀಕಿ ನಾಯಕರಿಗೆ ಯಾವುದೇ ನಿಗಮ, ಮಂಡಳಿಗಳಲ್ಲಿ ಅವಕಾಶ ನೀಡಿಲ್ಲ.  ರಾಜ್ಯದಲ್ಲಿಯೂ ವಾಲ್ಮೀಕಿ ಸಮಾಜದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಅವರ ಬದಲಾಗಿ ಅದೇ ಸಮುದಾಯದ ಶಾಸಕರಿಗೆ ಅವಕಾಶ ನೀಡುವುದು ಬಿಟ್ಟು ತಮ್ಮ ಬಳಿ ಆ ಖಾತೆ ಇಟ್ಟುಕೊಂಡಿದ್ದೇಕೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅಹಿಂದ ಎಂದಾಗ ಸಚಿವ ಸತೀಶ ಜಾರಕಿಹೊಳಿ ಅವರೇ ಮುಂದೆ ನಿಂತು ಅವರ ಪರವಾಗಿ ಕೆಲಸ ಮಾಡಿದ್ದರು. ಉಗ್ರಪ್ಪ ಅವರೂ ಬಾದಾಮಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಪರ ಕೆಲಸ ಮಾಡಿದ್ದರು. ಉಗ್ರಪ್ಪ ಅವರಿಗೆ ವಾಲ್ಮೀಕಿ ಸಮಾಜಕ್ಕೆ ಅನ್ಯಾಯ ಮಾಡಬೇಡಿ ಎಂದು ಕೇಳುವ ಹಕ್ಕಿದೆ ಎಂದರು.

ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಬೇರೆಯವರು ಎಸ್‌ಟಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೋರ್ಟ್ ಆದೇಶ ಬಂದಿದ್ದು, ನಕಲಿ ಪ್ರಮಾಣ ಪತ್ರ ಪಡೆದವರ ವಿರುದ್ಧ ವಾರದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಮಹರ್ಷಿ ವಾಲ್ಮೀಕಿ ಅವರಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆಯಾಚಿಸಬೇಕು. ಬಿಜೆಪಿಯ ಎಸ್‌ಟಿ ಘಟಕಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರನ್ನು ನೇಮಕ ಮಾಡಲಾಗಿದೆ. ಅವರನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ಯಲ್ಲಪ್ಪ ಕ್ಯಾದಿಗೇರಿ, ಹನಮಂತ ಡೋಣಿ, ಜಯರಾಜ ಹಾದಿಕರ, ಹೇಮಂತ ಚೂರಿ, ಕೃಷ್ಣಾ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.