ಬಾಗಲಕೋಟೆ: ಇಲ್ಲಿನ ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿ, ಇಂಟರ್ನ್‌ಶಿಪ್ ಮಾಡುತ್ತಿದ್ದ ವಿದ್ಯಾರ್ಥಿ ಲಕ್ಷ್ಮೀಪುತ್ರ ಕುಲಕರ್ಣಿ (24) ಸೋಮವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
‘ಎರಡು ದಿನಗಳ ಹಿಂದೆ ರಜೆ ಮೇಲೆ ಸಂಬಂಧಿಕರ ಜೊತೆ ಬೆಂಗಳೂರಿಗೆ ಹೋಗಿದ್ದ ಅವರು, ಅಲ್ಲಿಂದ ತಮಿಳುನಾಡಿಗೆ ಹೋಗಿದ್ದರು. ವಾಪಸ್ ಬರುವಾಗ, ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು’ ಎಂದು ಮೂಲಗಳು ತಿಳಿಸಿವೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಕುಮಸಗಿ ಗ್ರಾಮದ ಲಕ್ಷ್ಮೀಪುತ್ರ ಅವರು 2019-20ನೇ ಸಾಲಿನಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದರು. ಜುಲೈ 10ಕ್ಕೆ ಇಂಟರ್ನ್‌ಶಿಪ್ ಪೂರ್ಣವಾಗುತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.