ಜಿ. ಪರಮೇಶ್ವರ
ಬಾಗಲಕೋಟೆ: ಗೃಹಸಚಿವ ಜಿ.ಪರಮೇಶ್ವರ ಜೂನ್ 23 ರಂದು ನಗರಕ್ಕೆ ಆಗಮಿಸಲಿದ್ದಾರೆ.
ಜೂನ್ 22 ರಂದು ಭಾನುವಾರ ಸಂಜೆ 5 ಗಂಟೆಗೆ ಜಿಲ್ಲೆಯ ಬಾದಾಮಿ ಪಟ್ಟಣಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿರುವ ಸಚಿವರು, ಜೂನ್ 23 ಸೋಮವಾರ ಬೆಳಿಗ್ಗೆ 11.30ಕ್ಕೆ ಬಾದಾಮಿಯಿಂದ ಹೊರಟು ಮಧ್ಯಾಹ್ನ 12.15ಕ್ಕೆ ಬಾಗಲಕೋಟೆ ನಗರಕ್ಕೆ ಆಗಮಿಸುವರು.
12.30ಕ್ಕೆ ನವನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕೌಶಲ ಅಭಿವೃದ್ಧಿ ಕೇಂದ್ರ ಮತ್ತು ಪೊಲೀಸ್ ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 2.30 ರಿಂದ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಅವರು ಹುಬ್ಬಳ್ಳಿಗೆ ತೆರಳುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.