
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ‘ಜಿಲ್ಲೆಯಾದ್ಯಂತ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸಿ’ ಜಿಲ್ಲಾಡಳಿತ ಆದೇಶಿಸಿದೆ. ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ತರಬೇತಿ ಕೇಂದ್ರಗಳಲ್ಲಿ ಇದು ಪಾಲನೆಯಾಗಬೇಕು’ ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಪ್ರವೃತ್ತಿ ತಡೆಗೆ ಜಿಲ್ಲಾ ಮಟ್ಟದಲ್ಲಿ ರಚಿಸಲಾದ ಮಕ್ಕಳ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ಹೊರತರುವುದು ಮೊಬೈಲ್ ಫೋನ್ ಬಳಕೆ ನಿಷೇಧದ ಉದ್ದೇಶ. ಸುಪ್ರೀಂ ಕೋರ್ಟ್ ಸೂಚನೆಯಂತೆ ಮಾನಸಿಕ ಆರೋಗ್ಯ ನೀತಿ ಜಾರಿ ಸೇರಿ 15 ಮಾರ್ಗಸೂಚಿಗಳನ್ನು ರಚಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.