ADVERTISEMENT

ಬಾಗಲಕೋಟೆ ವಿಶ್ವವಿದ್ಯಾಲಯದ ಹಾಕಿ, ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 8:22 IST
Last Updated 24 ಜನವರಿ 2026, 8:22 IST
<div class="paragraphs"><p>ಬಾಗಲಕೋಟ ವಿವಿ ಬ್ಲೂ ಆಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ನವನಗರ ಸ.ಪ್ರ.ದ. ಕಾಲೇಜಿನಲ್ಲಿ ಸನ್ಮಾನಿಸಲಾಯಿತು</p></div>

ಬಾಗಲಕೋಟ ವಿವಿ ಬ್ಲೂ ಆಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ನವನಗರ ಸ.ಪ್ರ.ದ. ಕಾಲೇಜಿನಲ್ಲಿ ಸನ್ಮಾನಿಸಲಾಯಿತು

   

ಬಾಗಲಕೋಟೆ: ‘ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ವಿಶ್ವವಿದ್ಯಾಲಯದ ಹಾಕಿ ಮತ್ತು ಕ್ರಿಕೆಟ್ ತಂಡಕ್ಕೆ ತಲಾ ಇಬ್ಬರು ಆಯ್ಕೆಯಾಗಿದ್ದು, ವಿಶ್ವವಿದ್ಯಾಲಯದ ಬ್ಲೂ ಆಗಿದ್ದಾರೆ’ ಎಂದು ಪ್ರಾಚಾರ್ಯ ಅರುಣಕುಮಾರ ಗಾಳಿ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗದ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಆವರಣದಲ್ಲಿ ಕಾಲೇಜಿನ ಕ್ರೀಡಾಪಟುಗಳಾದ ವಿಶಾಲ ಲಮಾಣಿ, ಯಶವಂತ ನಾಯಕ (ಹಾಕಿ), ಭೂಪತಿ ಲಮಾಣಿ, ನಾಗರಾಜ ಲಕ್ಕುಂಡಿ (ಕ್ರಿಕೆಟ್) ಅವರಿಗೆ ಸನ್ಮಾನಿಸಿ ಅವರು ಮಾತನಾಡಿದರು.

ADVERTISEMENT

ವಿಶ್ವವಿದ್ಯಾಲಯ ಮಟ್ಟದ ಕ್ರೀಡೆಯಲ್ಲಿ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿ ಬೆಳಗಿಸಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದೊಂದಿಗೆ ಆದರ್ಶ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾ ವಿಭಾಗದ ನಿರ್ದೇಶಕ ನೀಲಪ್ಪ ಕುರಿ ಮಾತನಾಡಿ, ಪದವಿ ಕಲಿಯುವ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿರುವ ಸಾಕಷ್ಟು ಅವಕಾಶ ಬಳಸಿಕೊಂಡು  ಸಾಧಕರಾಗಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.