ADVERTISEMENT

ಬಾಗಲಕೋಟೆ | ಬುದ್ದಿವಾದ ಹೇಳಿದ್ದಕ್ಕೆ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 5:50 IST
Last Updated 24 ಆಗಸ್ಟ್ 2025, 5:50 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬಾಗಲಕೋಟೆ: ಮದ್ಯ ಕುಡಿದರೆ ಜೀವನ ಸಾಗಿಸುವುದು ತೊಂದರೆಯಾಗುತ್ತದೆ ಎಂದು ಬುದ್ದಿವಾದ ಹೇಳಿದ ಪತ್ನಿಯನ್ನು ಕೊಲೆ ಮಾಡಿದ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎನ್‌.ವಿ. ವಿಜಯ್, ಜೀವಾವಧಿ ಶಿಕ್ಷೆ, ದಂಡ ವಿಧಿಸಿ ತೀರ್ಪು  ನೀಡಿದ್ದಾರೆ.

ಬೀಳಗಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಮಲ್ಲಪ್ಪ ಹೆರಕಲ್ ಶಿಕ್ಷೆಗೆ ಒಳಗಾದ ವ್ಯಕ್ತಿ.

ADVERTISEMENT

ಮಲ್ಲಪ‍್ಪ ದಿನಾಲು ಕುಡಿದು ಬರುತ್ತಿದ್ದ. ಮಲ್ಲಪ್ಪನಿಗೆ ಆತನ ಪತ್ನಿ ಪಾರ್ವತಿ, ‘ಸಣ್ಣ ಸಣ್ಣ ಮಕ್ಕಳಿವೆ. ನಿತ್ಯ ಕುಡಿದರೆ ಜೀವನ ಸಾಗಿಸುವುದು ಕಷ್ಟವಾಗುತ್ತದೆ’ ಎಂದು ಬುದ್ಧಿವಾದ ಹೇಳಿದ್ದರು.

ಪತ್ನಿಗೆ ಚಿತ್ರ ಹಿಂಸೆ ಮಾಡಿ ಕೊಡಲಿಯಿಂದ ಹೊಡದು ಕೊಲೆ ಮಾಡಿದ್ದಾನೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್‌ಸ್ಪೆಕ್ಟರ್ ಶಿವಾನಂದ ಕಮತಗಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಮಲ್ಲಪ್ಪನಿಗೆ ಜೀವಾವಧಿ ಶಿಕ್ಷೆ, ₹5 ಸಾವಿರ ದಂಡ ವಿಧಿಸಿದ್ದಾರೆ. ನೋಂದವರಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ವಿ.ಜಿ.ಹೆಬಸೂರ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.