ADVERTISEMENT

ಬಾಗಲಕೋಟೆ | ಆರ್.ಡಿ.ಪಿ.ಆರ್ ಕ್ರೀಡಾಕೂಟ ಡಿ.25ರಿಂದ: ಜಿ.ಪಂ ಸಿಇಒ ಶಶಿಧರ ಕುರೇರ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 4:13 IST
Last Updated 21 ಡಿಸೆಂಬರ್ 2025, 4:13 IST
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಆರ್‌ಡಿಪಿಆರ್ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಚಾರದ ಕರಪತ್ರಗಳನ್ನು ಗಣ್ಯರು ಬಿಡುಗಡೆಗೊಳಿಸಿದರು
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಆರ್‌ಡಿಪಿಆರ್ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಚಾರದ ಕರಪತ್ರಗಳನ್ನು ಗಣ್ಯರು ಬಿಡುಗಡೆಗೊಳಿಸಿದರು   

ಬಾಗಲಕೋಟೆ: ಪ್ರಸಕ್ತ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಡಿ.25ರಿಂದ 27ರ ವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಒ ಶಶಿಧರ ಕುರೇರ ಹೇಳಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಮಯ ಪರಿಪಾಲನೆ ಮಾಡಿದಾಗ ಮಾತ್ರ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಕ್ರೀಡೆ, ಉಡುಗೆ ತೊಡುಗೆಯ ಶೈಲಿ, ಊಟ, ಸಾಂಸ್ಕೃತಿಕ ಕಾರ್ಯಕ್ರಮ ಸಿದ್ಧತೆಗಳು ಸೇರಿದಂತೆ ಆಯಾ ಸಮಿತಿಗಳ ಜೊತೆ ಚರ್ಚಿಸಲು ಸಿಇಒ ತಿಳಿಸಿದರು. ಟಿಶರ್ಟ್ ಮತ್ತು ಟ್ರೋಫಿಗಳನ್ನು ಅನಾವರಣಗೊಳಿಸಲಾಯಿತು.

ಜಿ.ಪಂ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಆಕಾಶ್ ವಂದೆ, ಭೂಸೇನಾ ಕಾರ್ಯನಿರ್ವಾಹಕ ಎಂಜಿನಿಯರ್ ಸದಾಶಿವಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ರಾಜು ವಾರದ ಮತ್ತು ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.