ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮೇಲಿನ ಕಲ್ಲು, ಚಪ್ಪಲಿ ತೂರಾಟ ಖಂಡಿಸಿ ಫೆ.26ರಂದು ‘ಬಾಗಲಕೋಟೆ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಹಿಂದೂ ಮುಖಂಡರು ಕರೆದಿದ್ದ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಚರಂತಿಮಠದ ಶಿವಾನುಭವ ಮಂಟಪದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಕುಮಾರಸ್ವಾಮಿ ಹಿರೇಮಠ, ‘ಫೆ.26ರಂದು ಬೆಳಿಗ್ಗೆ 10ಕ್ಕೆ ಕಿಲ್ಲಾದ ಅಂಬಾ ಭವಾನಿ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಮಾಡಲಾಗುತ್ತದೆ’ ಎಂದರು.
ವಕೀಲ ಕಿರಣ ಪವಾಡಶೆಟ್ಟರ್ ಅವರು, ‘ಘಟನೆಗೆ ಸಂಬಂಧಿಸಿ 8 ಜನರನ್ನು ಬಂಧಿಸಿದರೆ ಸಾಲದು. ಮಸೀದಿಯಲ್ಲಿ ಸೇರಿದ್ದವರು, ಮಸೀದಿಯ ಮೌಲ್ವಿ ಹಾಗೂ ಸಮಿತಿ ಪದಾಧಿಕಾರಿಗಳ ಮೇಲೂ ಪ್ರಕರಣ ದಾಖಲಿಸಿ ಬಂಧಿಸಬೇಕೆಂಬ ಬೇಡಿಕೆಯನ್ನಿಟ್ಟು ಗಡುವು ನೀಡಲಾಗಿತ್ತು. ಆದರೆ, ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಅದಕ್ಕೇ ಪ್ರತಿಭಟನೆ ಮಾಡಲಾಗುತ್ತಿದೆ’ ಎಂದರು.
ಅಲ್ಲದೆ, ಅದೇ ಮಾರ್ಗದಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಮಾಡಲಾಗುವುದು ಎಂದರು.
ಸಂಸದರಾದ ಪಿ.ಸಿ.ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಅರುಣ ಶಹಾಪುರ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.