ADVERTISEMENT

ಬಾಗಲಕೋಟೆ | ಹಲ್ಲೆ: ಸ್ವಯಂಪ್ರೇರಿತ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 18:54 IST
Last Updated 22 ಡಿಸೆಂಬರ್ 2025, 18:54 IST
   

ಬಾಗಲಕೋಟೆ: ಇಲ್ಲಿನ ದಿವ್ಯಜ್ಯೋತಿ ಅಂಧ ಮಕ್ಕಳ ಶಾಲೆಯಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‘ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬಾಲ ನ್ಯಾಯ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ. ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ’ ಎಂದು ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.