ಪ್ರಾತಿನಿಧಿಕ ಚಿತ್ರ
ಬಾಗಲಕೋಟೆ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆಯಿಂದ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.
ಬಾಗಲಕೋಟೆ, ಹುನಗುಂದ, ಅಮೀನಗಡ, ಬಾದಾಮಿ, ಇಳಕಲ್, ಗುಳೇದಗುಡ್ಡ ಸೇರಿದಂತೆ ವಿವಿಧೆಡೆ ಮಳೆಯಾಗಿದೆ.
ಮಳೆ ಕೊರತೆಯಿಂದಾಗಿ ಬಿತ್ತನೆ ಮಾಡಿದ ಬೆಳೆ ಬಾಡುವ ಆತಂಕ ರೈತರಿಗೆ ಎದುರಾಗಿತ್ತು. ಗುರುವಾರ ಕೆಲವು ಕಡೆಗಳಲ್ಲಿ, ಶುಕ್ರವಾರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.