ADVERTISEMENT

ಮನೆಗೊಂದು ಗ್ರಂಥಾಲಯ ಸ್ಥಾಪಿಸಲು ಚಿಂತನೆ: ಮಾನಸ

‘ಮನೆಗೊಂದು ಗ್ರಂಥಾಲಯ’ ಯೋಜನೆ ಪೂರ್ವಭಾವಿ ಸಭೆ: ಮಾನಸ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 4:21 IST
Last Updated 24 ನವೆಂಬರ್ 2025, 4:21 IST
ಬಾಗಲಕೋಟೆಯಲ್ಲಿ ಕಸಾಪದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರನ್ನು ಸನ್ಮಾನಿಸಲಾಯಿತು
ಬಾಗಲಕೋಟೆಯಲ್ಲಿ ಕಸಾಪದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅವರನ್ನು ಸನ್ಮಾನಿಸಲಾಯಿತು   

ಬಾಗಲಕೋಟೆ: ‘ಕನ್ನಡ ಪುಸ್ತಕ ಪ್ರಾದಿಕಾರದ ಮಹತ್ವಕಾಂಕ್ಷೆ ಯೋಜನೆಗಳಲೊಂದಾದ ಮನೆಗೊಂದು ಗ್ರಂಥಾಲಯ ಯೋಜನೆಉಡಿ ರಾಜ್ಯದಲ್ಲಿ ಒಂದು ಲಕ್ಷ ಗ್ರಂಥಾಲಯಗಳನ್ನು ಪ್ರಾರಂಭಿಸುವ ಯೋಜನೆ ಇದೆ’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ಭಾನುವಾರ ಆಯೋಜನೆಗೊಂಡ ‘ಮನೆಗೊಂದು ಗ್ರಂಥಾಲಯ’ ಯೋಜನೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆಗಳಲ್ಲಿಯೇ ಗ್ರಂಥಾಲಯ ಆರಂಭಿಸುವುದರಿಂದ ಮನೆಯಲ್ಲಿರುವ ಮಕ್ಕಳೂ ಸೇರಿದಂತೆ ಎಲ್ಲರಿಗೂ ಓದುವ ಹವ್ಯಾಸ ಬೆಳೆಯುತ್ತದೆ’ ಎಂದರು.

‘ಲೇಖಕರು, ಪ್ರಕಾಶಕರು, ಮುದ್ರಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಪುಸ್ತಕಕ್ಕೆ ಸಂಬಂಧಿಸಿದ ಚಟುವಟಿಕೆಗಳೆಲ್ಲರ ರಕ್ಷಣೆ ಮಾಡಲಾಗುವುದು’ ಎಂದರು

ADVERTISEMENT

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮಹನೀಯರನ್ನು ಗುರುತಿಸುವಂತಹ ಕಾರ್ಯ ಪುಸ್ತಕ ಪ್ರಾಧಿಕಾರದಿಂದ ಆಗಲಿ. ಜಿಲ್ಲೆಯ ಸಾಹಿತಿಗಳು ಹಾಗೂ ಪ್ರಕಾಶಕರ ಸಹಕಾರದೊಂದಿಗೆ ಪ್ರಾಧಿಕಾರದ ಯೋಜನೆಗಳನ್ನು ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.

ಸಾಹಿತಿಗಳಾದ ಪಿ.ಎಂ. ಹುಗ್ಗಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ಸಿ.ಎಸ್.ನಾಗನೂರ ಇದ್ದರು.

ಪ್ರಾಧಿಕಾರವು ವಿಶೇಷವಾದಂತಹ ಯೋಜನೆಗಳನ್ನು ಹಾಕಿಕೊಂಡು ಪುಸ್ತಕ ಓದುವ ಹವ್ಯಾಸ ಬೆಳೆಸುವ ಕೆಲಸ ಮಾಡುತ್ತಿದೆ. ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ
ಮಾನಸ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.