
ಶಾಂತಗೌಡ ಪಾಟೀಲ
ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ.
ಈ ಕುರಿತು ಮಾತನಾಡಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಶಾಂತಿ ಸಭೆಗೆ ಹಿಂದೂ ಮುಖಂಡರು ಮಾತ್ರ ಹಾಜರಾಗಿದ್ದೆವು. ಇನ್ನೊಂದು ಸಮುದಾಯದ ಮುಖಂಡರು ಹಾಕರಾಗಿರಲಿಲ್ಲ ಎಂದು ದೂರಿದರು.
ಜಿಲ್ಲಾಡಳಿತ ಎಲ್ಲರನ್ನೂ ಕರೆದು ಸಭೆ ಮಾಡಬೇಕು. ಇಲ್ಲದಿದ್ದರೆ ನಮ್ಮ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದರು.
ಫೆ.22ರಂದು ಸಭೆ ಕರೆದು ಹಿಂದೂ ಮೆರವಣಿಗೆ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಏಕಕಾಲಕ್ಕೆ ಸಭೆ ಎರಡೂ ಸಮುದಾಯದವರು ಬಂದಿರಲಿಲ್ಲ. ನಂತರ ಅವರು ಬಂದಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ. ಶುಕ್ರವಾರ ನಡೆದ ಕಲ್ಲು ತೂರಾಟ ಮಾಡಿದವರ ವಿರುದ್ಧವೂ ಕ್ರಮಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.