
ಪ್ರಜಾವಾಣಿ ವಾರ್ತೆಪೊಲೀಸ್ (ಸಾಂಧರ್ಭಿಕ ಚಿತ್ರ)
– ಪ್ರಜಾವಾಣಿ ಚಿತ್ರ
ಬಾಗಲಕೋಟೆ: ಪೊಲೀಸ್ ವೇಷ ಧರಿಸಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ನವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನವನಗರ ಸೆಕ್ಟರ್ ನಂ.26ರ ನಿವಾಸಿ ಅರುಣ ಬಂಡಿವಡ್ಡರ್ ಬಂಧಿತ ಆರೋಪಿ. ಪೊಲೀಸ್ ಅಧಿಕಾರಿ ವೇಷ ಧರಿಸಿ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿ, ಅನಿಲ ಎಂಬುವವರನ್ನು ಬೆದರಿಸಿ ₹2 ಸಾವಿರ ಕಿತ್ತುಕೊಂಡು ಪರಾರಿಯಾಗಿದ್ದ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.