ADVERTISEMENT

ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಇಬ್ಬರ ಬಂಧನ

ಜಿಲ್ಲೆ ಪ್ರವೇಶಿಸದಂತೆ ಮುತಾಲಿಕ್‌, ಕೆರೆಹಳ್ಳಿಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 1:07 IST
Last Updated 22 ಫೆಬ್ರುವರಿ 2026, 1:07 IST
   

ಬಾಗಲಕೊಟೆ: ನಗರದ ಮಟನ್‌ ಮಾರುಕಟ್ಟೆ ಸಮೀಪ ಗಲಭೆ ಮಾಡುವ ಉದ್ದೇಶ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಅಶೋಕ ಬಾರಕೇರ, ಸಂದೀಪ ಘೆರಡೆ ಬಂಧಿದರು. ಬಾರಕೇರ ಒಡುವಾಗ ಬಿದ್ದು ಕೈಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘೆರಡೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಿಂಗಳ ನಿರ್ಬಂಧ: ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿಂದೂ ಜಾಗರಣ ವೇದಿಕೆ ದಕ್ಷಣ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯ ಪ್ರಮೋದ್ ಮುತಾಲಿಕ, ರಾಷ್ಟ್ರೀಯ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಫೆ.21ರಿಂದ ಮಾ.21ರವರೆಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.