ADVERTISEMENT

ಬಾಗಲಕೋಟೆ | ಪೌರ ಕಾರ್ಮಿಕರ ಸೇವೆ ಸರ್ವಶ್ರೇಷ್ಠ: ಸವದಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 5:28 IST
Last Updated 24 ಸೆಪ್ಟೆಂಬರ್ 2025, 5:28 IST
ರಬಕವಿ– ಬನಹಟ್ಟಿ ನಗರಸಭೆಯ ಕಾರ್ಯಾಲಯದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು
ರಬಕವಿ– ಬನಹಟ್ಟಿ ನಗರಸಭೆಯ ಕಾರ್ಯಾಲಯದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯನ್ನು ಶಾಸಕ ಸಿದ್ದು ಸವದಿ ಉದ್ಘಾಟಿಸಿದರು   

ರಬಕವಿ ಬನಹಟ್ಟಿ: ‘ಪೌರ ಕಾರ್ಮಿಕರನ್ನು ಕೀಳರಿಮೆಯಿಂದ ಕಾಣಬಾರದು. ಅವರ ಮಾಡುತ್ತಿರುವ ಕಾರ್ಯ ಸರ್ವಶ್ರೇಷ್ಠವಾದುದು. ಪೌರ ಕಾರ್ಮಿಕರನ್ನು ಮತ್ತು ಅವರು ಸಲ್ಲಿಸುವ ಸೇವೆಯನ್ನು ನಾವು ಗೌರವಿಸಬೇಕು’ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಮಂಗಳವಾರ ಇಲ್ಲಿನ ನಗರಸಭೆಯ ಕಾರ್ಯಾಲಯದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದ ಸಾವಿರಾರು ಪೌರ ಕಾರ್ಮಿಕರನ್ನು ಕಾಯಂಗೊಳಿಸಿದ್ದರು. ಪೌರ ಕಾರ್ಮಿಕರು ಮಕ್ಕಳು ಕೂಡಾ ವಿದ್ಯಾವಂತರಾಗಬೇಕು. ಅನುಕೂಲಸ್ಥರು ತಮಗೆ ದೊರೆಯುವ ಮೀಸಲಾತಿಯನ್ನು ಬಿಟ್ಟುಕೊಡಬೇಕು. ಇದರಿಂದ ಸೌಲಭ್ಯ ವಂಚಿತರಿಗೆ ಅನುಕೂಲವಾಗುತ್ತದೆ’ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ADVERTISEMENT

ಪೌರಾಯುಕ್ತ ರಮೇಶ ಜಾಧವ ಮಾತನಾಡಿ, ‘ಪೌರ ಕಾರ್ಮಿಕರಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ಸಾಗಿಸಬೇಕು ಮತ್ತು ಆರೋಗ್ಯದ ಕಡೆಗೂ ಹೆಚ್ಚಿನ ಗಮನ ನೀಡಬೇಕು’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು ಮತ್ತು ಪೌರ ಕಾರ್ಮಿಕರಿಗೆ ಹಮ್ಮಿಕೊಂಡ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ನಗರಸಭೆಯಅಧ್ಯಕ್ಷೆ ವಿದ್ಯಾ ಧಬಾಡಿ, ಉಪಾಧ್ಯಕ್ಷೆ ದೀಪಾ ಗಾಡಿವಡ್ಡರ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಮಾನಿಂಗ ಸಜ್ಜಾಗೋಳ, ಉಪಾಧ್ಯಕ್ಷ ವೆಂಕೋಜಿ ಕೋರೆನ್ನವರ, ಗೌರಿ ಮಿಳ್ಳಿ, ದುರ್ಗವ್ವ ಹರಿಜನ, ದೀಪಾ ಕೊಣ್ಣೂರ, ಯಲ್ಲಪ್ಪ ಕಟಗಿ, ಅರುಣ ಬುದ್ನಿ, ಶ‍್ರೀಶೈಲ ಆಲಗೂರ, ಬಿ.ಎಸ್.ಗಡಾದ, ಶೋಭಾ ಹೊಸಮನಿ, ಸುನೀಲ ಬಬಲಾದಿ, ಅಮೀರಖಾನ ಖಲೀಫಾ ನಗರಸಭೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.