ಮಹಾಲಿಂಗಪುರ (ಬಾಗಲಕೋಟೆ ಜಿಲ್ಲೆ): ಸಮೀಪದ ಢವಳೇಶ್ವರ ಗ್ರಾಮದ ಮೊರಬದ ತೋಟದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಬಾಲಕನಿಗೆ 1ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಕಟ್ಟಿಗೆಯಿಂದ ಬಲಗಣ್ಣಿಗೆ ಚುಚ್ಚಿ ಗಾಯಗೊಳಿಸಿದ್ದಾನೆ.
ಪೆನ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ವಿದ್ಯಾರ್ಥಿಗಳ ಮೇಲೆ ನಿಗಾವಹಿಸದ ಮುಖ್ಯಶಿಕ್ಷಕಿ ಜಯಶ್ರೀ ನಡುವಿನಕೇರಿ ಹಾಗೂ ಅತಿಥಿ ಶಿಕ್ಷಕಿ ಶಿಲ್ಪಾ ಅಂಬಿ ಅವರ ವಿರುದ್ಧ ಗಾಯಗೊಂಡ ಬಾಲಕನ ತಂದೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಸೆ.4 ರಂದು ಪ್ರಕರಣ ದಾಖಲಿಸಿದ್ದಾರೆ.
‘ವಿದ್ಯಾರ್ಥಿ ಬಲಗಣ್ಣಿನ ಕಣ್ಣುಗುಡ್ಡೆಗೆ ಹಾನಿಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. 40 ದಿನದ ನಂತರ ಹಾನಿ ಸ್ವರೂಪ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಮುಧೋಳ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ ತಿಳಿಸಿದರು. ‘ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.