ಬಾಗಲಕೋಟೆ: ಹಿರಿಯ ನಾಗರಿಕರ ಉತ್ಸಾಹದ ಜೀವನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿರಿಯ ನಾಗರಿಕರ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಪ್ರತಿಯೊಬ್ಬ ಹಿರಿಯ ನಾಗರಿಕರು ಕ್ರೀಡೆ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ಸಾಹದ ಜೀವನ ನಡೆಸಬೇಕು. ದೈನಂದಿನ ಕೆಲಸ ಮತ್ತು ಸವಾಲುಗಳಿಂದ ಮನಸ್ಸಿನ ಮೇಲೆ ಉಂಟಾಗುವ ಒತ್ತಡ ಕಡಿಮೆ ಮಾಡಲು ಕ್ರೀಡೆಗಳಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕವಾಗಿದೆ. ದೈಹಿಕ ವ್ಯಾಯಾಮ, ಯೋಗ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ವೃದ್ದರು ಉತ್ತಮ ಆರೋಗ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಜವಾಬ್ದಾರಿ ಹೊಂದಿದ್ದಾರೆ. ಆದ್ದರಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಸಮಾಜಕ್ಕೆ ತಮ್ಮ ಅನುಭವಗಳನ್ನು ಹಂಚಿಕೊಳ್ಳಬೇಕು ಎಂದು ಹೇಳಿದರು.
ಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಗಿರಿಜಾ ಪಾಟೀಲ, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಸಿದ್ದಲಿಂಗಪ್ಪ ಗುಳೇದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.