
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಜಿಲ್ಲಾ ಪೊಲೀಸ್ ವರಿಷ್ಠ ಸಿದ್ದಾರ್ಥ ಅವರ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ಮಾಡಿದ್ದಾರೆ. ಕೂಡಲೇ ಕಲ್ಲು ತೂರಾಟ ಮಾಡಿದವರನ್ನು ಬಂಧಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಕುಮಾರಸ್ವಾಮಿ ಹಿರೇಮಠ ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದವಿಡಿಯೊಗಳು ಪೊಲೀಸರ ಬಳಿ ಒವೆ. ಅವುಗಳ ಆಧಾರದ ಮೇಲೆ ಕಲ್ಲು ತೂರಾಟ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಅವರ ಬಂಧನಕ್ಕೆ ಮುಂದಾಗದಿದ್ದರೆ ಅವರು ಪರಾರಿಯಾಗಲಿದ್ದಾರೆ ಎಂದು ಆರೋಪಿಸಿದರು.
ಕೆಲವೇ ದಿನಗಳಲ್ಲಿ ವಿಶ್ವ ಪ್ರಸಿದ್ದ ಹೋಳಿ ಹಬ್ಬ ಬರಲಿದೆ. ಅದೂ ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಐಜಿಪಿ ಅವರಿಗೂ ದೂರು ನೀಡಲಾಗುವುದು ಎಂದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.