ಪ್ರಾತಿನಿಧಿಕ ಚಿತ್ರ
ಬಾಗಲಕೋಟೆ: ಸಹಪಾಠಿಗಳು ಕಿರುಕುಳ ನೀಡಿದ್ದಾರೆಂದು ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಳೇದಗುಡ್ಡದ ಭಂಡಾರಿ ಕಾಲೇಜಿನ ಬಿಎ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿ ಅಂಜಲಿ ಮುಂಡಾಸ್(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಕಾಲೇಜು ವಿದ್ಯಾರ್ಥಿಗಳಾದ ಹರ್ಷಾ, ಪ್ರದೀಪ್ ಹಾಗೂ ಇತರ ವಿದ್ಯಾರ್ಥಿಗಳು ಮಾನಸಿಕ ಕಿರುಕುಳ ನೀಡಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.