ADVERTISEMENT

ಬಾಗಲಕೋಟೆ | ಮಹಿಳೆ ಮೇಲೆ ಅತ್ಯಾಚಾರ; ಆರೋಪ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:57 IST
Last Updated 12 ಜನವರಿ 2026, 6:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಕಬ್ಬಿನ ಹೊಲದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಹುನಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಜಗಲ್‌ ಸಮೀಪದ ಬಳಿ ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕರು ಮಹಿಳೆಯನ್ನು ನೋಡಿ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

ADVERTISEMENT

ಹುನಗುಂದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಘಟನೆಯ ನಡೆದ ರಸ್ತೆ, ಗ್ರಾಮಗಳಲ್ಲಿ ಬರುವ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಮಾಡಿದ್ದಾರೆ. ಅವರಲ್ಲಿ ಅನುಮಾನ ಬಂದ ಕೆಲವರನ್ನು ಕರೆದು ವಿಚಾರಣೆ ಮಾಡಿದ್ದಾರೆ. ಜ.5ರಂದು ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.