ADVERTISEMENT

ಬಣಜಿಗ ಸಮಾಜ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:49 IST
Last Updated 24 ಜೂನ್ 2025, 16:49 IST
   

ಬಾಗಲಕೋಟೆ: ತಾಲ್ಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಣಜಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಶೇ90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಜುಲೈ 20ರಂದು ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.

ಅಂಕಪಟ್ಟಿ ನಕಲು ಪ್ರತಿ ಹಾಗೂ ಎರಡು ಪಾಸ್‌ಪೋರ್ಟ್ ಸೈಜ್ ಫೋಟೊ, ಮೊಬೈಲ್ ನಂಬರ್ ಸಹಿತ ಜುಲೈ 10ರೊಳಗೆ ಸಂಘಟಕರಾದ ಬಸವರಾಜ ತಿಪಶೆಟ್ಟಿ ಮೊ.99018 11370, ಅಶೋಕ ಚೆನ್ನಿಗಾವಿ ಮೊ.79758 59476 ಸಂಪರ್ಕಿಸಿ ದಾಖಲೆ ನೀಡಬೇಕು ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಶೀಲವಂತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.