ADVERTISEMENT

ಬಾದಾಮಿ: ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 4:12 IST
Last Updated 29 ಡಿಸೆಂಬರ್ 2025, 4:12 IST
ಬಾದಾಮಿ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಶಾಸಕ ಭೀಮಸೇನ ಚಿಮ್ಮನಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.
ಬಾದಾಮಿ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಶಾಸಕ ಭೀಮಸೇನ ಚಿಮ್ಮನಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು.   

ಬಾದಾಮಿ: ’ಜ. 3 ರಂದು ನಡೆಯುವ ಬನಶಂಕರಿದೇವಿ ಜಾತ್ರೆಗೆ ಭಕ್ತರಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಬೇಕು ’ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸಲಹೆ ನೀಡಿದರು.

ಬನಶಂಕರಿ ದೇವಾಲಯಕ್ಕೆ ಅವರು ಶನಿವಾರ ಭೇಟಿ ನೀಡಿ ಅಧಿಕಾರಿಗಳು ಕೈಗೊಂಡ ಕಾರ್ಯಗಳನ್ನು ಪರಿಶೀಲಿಸಿದರು.

‘ಉತ್ತರ ಕರ್ನಾಟಕದ ಬನಶಂಕರಿದೇವಿ ಜಾತ್ರೆಯು ತಿಂಗಳವರೆಗೆ ನಡೆಯುತ್ತದೆ. ನಿತ್ಯ ಲಕ್ಷಕ್ಕೂ ಅಧಿಕ ಭಕ್ತರು ಬರುವರು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ರಥೋತ್ಸವದ ಬೀದಿ, ಭದ್ರತೆ ,ಸ್ವಚ್ಛತೆ, ಆರೋಗ್ಯ, ಕುಡಿಯುವ ನೀರು, ರಸ್ತೆ ಸಾರಿಗೆ ಬಸ್ ಸಂಚಾರ ಮತ್ತಿತರ ಸೌಲಭ್ಯಗಳನ್ನು ಸರಿಯಾಗಿ ಕೈಗೊಳ್ಳಬೇಕು’ ಕುರಿತು ಅಧಿಕಾರಿಗಳಿಗೆ ಹೇಳಿದರು.

ADVERTISEMENT

‘ನಾಟಕ ಕಂಪನಿಗಳಿಂದ ನಾಟಕ ಪ್ರದರ್ಶನ, ಜಾನುವಾರು ಜಾತ್ರೆ, ದೇವಾಲಯ ಸುತ್ತಲಿನ ಅಲಂಕಾರ ಮತ್ತು ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಭದ್ರತೆಯ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು’ ಎಂದು ಪೊಲೀಸ್ ಅಧಿಕಾರಿಗಳಿಗೆ ಹೇಳಿದರು.

ತಹಶೀಲ್ದಾರ್ ಕಾವ್ಯಶ್ರೀ ಎಚ್. ಸಿಪಿಐ ಕರಿಯಪ್ಪ ಬನ್ನೆ, ಪಿಎಸ್ಐ ಹನುಮಂತ ನೇರಳೆ, ದೇವಾಲಯದ ಸಮಿತಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.