ADVERTISEMENT

ರಬಕವಿ ಬನಹಟ್ಟಿ: ವಿಶ್ವಶಾಂತಿಗಾಗಿ ಸರ್ವ ಧರ್ಮ ಮಹಾಸಂಗಮ ಅ.13ರಂದು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 6:34 IST
Last Updated 12 ಅಕ್ಟೋಬರ್ 2025, 6:34 IST
ರಬಕವಿ ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆಯುವ ವಿಶ್ವ ಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಬಿಡುಗಡೆ ಮಾಡಿದರು
ರಬಕವಿ ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆಯುವ ವಿಶ್ವ ಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಬಿಡುಗಡೆ ಮಾಡಿದರು   

ರಬಕವಿ ಬನಹಟ್ಟಿ: ಇದೇ 13ರಂದು ಬೆಳಿಗ್ಗೆ 10 ಗಂಟೆಗೆ ಸಮೀಪದ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕ ಮಠದಲ್ಲಿ ವಿಶ್ವ ಶಾಂತಿಗಾಗಿ ಸರ್ವ ಧರ್ಮ ಮಹಾಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀಶೈಲದ ಜಗದ್ಗುರು ಚನ್ನಪಂಡಿತರಾಧ್ಯಾ ಶಿವಾಚಾರ್ಯರು ವಹಿಸಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಬಸವಗೋಪಾಲ ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ತಿಳಿಸಿದರು.

ಅವರು ಶುಕ್ರವಾರ ಸಮೀಪದ ಬಂಡಿಗಣಿ ಗ್ರಾಮದಲ್ಲಿ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಅಧ್ಯಕ್ಷತೆಯನ್ನು ದಾನೇಶ್ವರ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಚಿವರಾದ ಎಚ್.ಕೆ.ಪಾಟೀಲ, ಸತೀಶ ಜಾರಕಿಹೊಳಿ, ಶಿವರಾಜ ತಂಗಡಗಿ, ಎಂ.ಬಿ.ಪಾಟೀಲ, ಜಮೀರ್ ಆಹ್ಮದ ಖಾನ್‌, ಮಾಜಿ ಸಭಾಪತಿ ರಮೇಶ ಕುಮಾರ, ಅಥಣಿ ಶಾಸಕ ಲಕ್ಷಣ ಸವದಿ, ತೇರದಾಳ ಶಾಸಕ ಸಿದ್ದು ಸವದಿ, ಸಂಸದ ಪಿ.ಸಿ.ಗದ್ದಿಗೌಡರ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿಮಠ, ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ, ಸೇರಿದಂತೆ ಪ್ರಮುಖ ರಾಜಕಾರಣಿಗಳು, ನಾಡಿನ ವಿವಿಧ ಧರ್ಮಗಳ ಮಠಾಧೀಶರು, ಧರ್ಮ ಗುರುಗಳು ಭಾಗವಹಿಸಲಿದ್ದು, ಹೆಸರಾಂತ ಸಂಗೀತ ಸಂಯೋಜಕ ಹಂಸಲೇಖ ವಿಶೇಷ ಆಮಂತ್ರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ದಾನೇಶ್ವರ ಸ್ವಾಮೀಜಿ ತಿಳಿಸಿದರು.

ADVERTISEMENT

ಬಾಲ ಗಾಯಕ ದಿಯಾ ಹೆಗಡೆ ಮತ್ತು ಪ್ರವೀಣ ಗಸ್ತಿ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಮಠದ ಭಕ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.