
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ಶನಿವಾರ ದಾಖಲಾಗಿದ್ದಾರೆ.
ತಲೆನೋವು, ವಾಂತಿ, ಎದೆನೋವು ತೊಂದರೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
'ಆಹಾರದಲ್ಲಿ ವ್ಯತ್ಯಾಸವಾಗಿ ಆರೋಗ್ಯ ಏರುಪೇರಾಗಿದೆ. ಆತಂಕ ಪಡುವ ವಿಷಯವಿಲ್ಲ. ಸ್ವಾಮೀಜಿ ಆರೋಗ್ಯ ಚೆನ್ನಾಗಿದೆ' ಎಂದು ಪಂಚಮಸಾಲಿ ಸಮಾಜದ ಕಲಬುರಗಿ ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಪಾಟೀಲ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.