ಶಿರೂರ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶಾಸಕ ಎಚ್.ವೈ.ಮೇಟಿ ನೆರವೇರಿಸಿದರು
ರಾಂಪುರ: ‘ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ನೀಡುವ ಯೋಜನೆ ಬಡವರು ಸೇರಿದಂತೆ ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲವಾಗಿದೆ’ ಎಂದು ಶಾಸಕ ಎಚ್.ವೈ.ಮೇಟಿ ಹೇಳಿದರು.
ಸಮೀಪದ ಶಿರೂರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ₹48 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
‘ಕಟ್ಟಡ ಕಾಮಗಾರಿ ಕೆಲಸ ಶೀಘ್ರ ಆರಂಭಿಸಿ ನಿಗದಿತ ಅವಧಿಯೊಳಗೆ ಮುಗಿಸಬೇಕು. ಗುಣಮಟ್ಟದ ಕಾಮಗಾರಿ ಮಾಡಬೇಕು’ ಎಂದು ಸೂಚಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವಾನಂದ ಆಲೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಉಪಾಹಾರ ಮತ್ತು ಊಟ ನೀಡುವ ವ್ಯವಸ್ಥೆ ಆರಂಭಿಸಲಾಗುವುದು ಎಂದು ತಿಳಿಸಿದರು.
ತಹಶೀಲ್ದಾರ್ ಅಮರೇಶ ಪಮ್ಮಾರ, ಪಟ್ಟಣ ಪಂಚಾಯಿತಿ ಮ್ಯಾನೇಜರ್ ಯು.ಜಿ.ವರದಪ್ಪನವರ, ರಂಗಪ್ಪ ಮಳ್ಳಿ, ಸಿದ್ದಪ್ಪ ಗಾಳಿ, ರಾಮನಗೌಡ ಮಾಚಾ, ಜಗದೀಶ ದೇಸಾನಿ, ಸುರೇಶ ರಾಜೂರ, ಸಿದ್ದಪ್ಪ ದಂಡಿನ, ಮುದಕಪ್ಪ ಬಿಲ್ಲಾರ, ಸಿದ್ದಪ್ಪ ಮೇಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.