ಬಾಗಲಕೋಟೆ: ‘ಸಾಧನೆಯ ಕನಸು ಕಾಣಲು ಹಣ ಬೇಕಿಲ್ಲ, ಕನಸು ನನಸಾಗಲು ಪಣ ಬೇಕು. ಅಂದಾಗ ಸಾಧನೆ ನಮ್ಮದಾಗುತ್ತದೆ’ ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಹೇಳಿದರು.
ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಮತ್ತು ಹಾಗೂ ಬಿ.ಕಾಂ., ಬಿ.ಬಿ.ಎ, ಎ.ಕಾಂ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ‘ವಾಣಿಜ್ಯ ಚಂದನ’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು. ಸಾಹಿತ್ಯ ರತ್ನ ಪ್ರಶಸ್ತಿ ಪಡೆದ ಪ್ರಾಧ್ಯಾಪಕ ಬಸವರಾಜ ಖೋತ ಹಾಗೂ ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಸ್.ಐ.ಪತ್ತಾರ ಅವರನ್ನು ಸತ್ಕರಿಸಲಾಯಿತು.
ವಿವಿಧ ವಿಭಾಗಳಲ್ಲಿ ರ‍್ಯಾಂಕ್ ಪಡೆದ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಜಗನ್ನಾಥ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು.
ರಾಜು ಮೇಲಿನಮನಿ, ಬಿ.ವಿ.ಖೋತ, ಕೆ.ಜಿ.ಮಳಜಿ, ಎಸ್.ಎಸ್.ಕೋಟ್ಯಾಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.