ಬಾಗಲಕೋಟೆ: ತಾಲ್ಲೂಕಿನ ತುಳಸಿಗೇರಿ ಬಳಿ ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಬೈಕ್ ಹಾಗೂ ಲಾರಿ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬಾಗಲಕೋಟೆಯ ನವನಗರದ ನಿವಾಸಿಗಳಾದ ಸಂಗಮೇಶ ಮೇತ್ರಿ (20) ಹಾಗೂ ಸ್ನೇಹಿತ ಹನುಮಂತ ಅಂಬಿಗೇರ ಬೈಕ್‌ನಲ್ಲಿ ಹೊರಟಿದ್ದು, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸಂಗಮೇಶ ಮೇತ್ರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞಾಹೀನರಾಗಿದ್ದ ಹನುಮಂತ ಅವರನ್ನು ಸ್ಥಳೀಯರು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.