ಬೀಳಗಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಅಹಿಂದ ಸಂಘಟನೆಗಳ ಸಹಯೋಗದಲ್ಲಿ ಮೇ 8ರಂದು ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಅಲ್ಪಸಂಖ್ಯಾತರ ಮುಖಂಡ ಅಬುಶಮಾ ಖಾಜಿ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಕಾಶಿಂ ಅಲಿ ಗೋಠೆ ಆಗ್ರಹಿಸಿದರು.
ಇಲ್ಲಿನ ಜಾಮಿಯಾ ಮಸ್ಜಿದ್‌ದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬಸವರಾಜ ಹಳ್ಳದಮನಿ ಹೇಳಿದರು.
ಸಂಗಪ್ಪ ಕಂದಗಲ್ಲ, ದಾವೂದ ಖಾಜಿ, ಮಹಮ್ಮದರಫೀಕ ಮುಜಾವರ, ಖಾಜಾಮೈನುದ್ದಿನ ತಹಶೀಲ್ದಾರ್, ಚಿನ್ನಪ್ಪ ಬಂಡಿವಡ್ಡರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.