ADVERTISEMENT

ಬೀಳಗಿ | ರಾಜ್ಯಮಟ್ಟದ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 5:27 IST
Last Updated 9 ಫೆಬ್ರುವರಿ 2026, 5:27 IST
–
   

ಬೀಳಗಿ: ರಾಮನಗರ ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಬೀಳಗಿ ತಾಲ್ಲೂಕಿನ ಗುರಪ್ಪ ನಿಂಗಪ್ಪ ನಿರಾಣಿ ಸರ್ಕಾರಿ ಪ್ರೌಢಶಾಲೆ ಬೀಳಗಿ ವಿದ್ಯಾರ್ಥಿ ಕರಿಯಪ್ಪ ಪೂಜಾರ ಇವರು 17 ವರ್ಷದ ವಯೋಮಿತಿ ಒಳಗಿನ ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾರೆ.

ವಿಶೇಷ ಸಾಧನೆ ಮಾಡಿ ಶಾಲೆಗೆ ಮತ್ತು ಬೀಳಗಿ ತಾಲ್ಲೂಕಿಗೆ ಹಾಗೂ ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗೆ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಆದಾಪೂರ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ ಹಾಗೂ ಎಲ್ಲ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT