
ಪ್ರಜಾವಾಣಿ ವಾರ್ತೆ
ಆರ್.ಬಿ. ತಿಮ್ಮಾಪುರ
ಬಾಗಲಕೋಟೆ: ‘ಪರಿಶಿಷ್ಟ ಜಾತಿಯವರಿಗೆ ನೀಡಲಾದ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಚಳಿಗಾಲ ಅಧಿವೇಶನದಲ್ಲಿ ಕಾಯ್ದೆ ರೂಪಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
‘ಸುಗ್ರೀವಾಜ್ಞೆ ತರಲು ಸಚಿವ ಸಂಪುಟದಲ್ಲಿ ಚರ್ಚಿಸಲಾಯಿತು. ಆದರೆ, ಮುಂದಿನ ದಿನಗಳಲ್ಲಿ ಕಾನೂನು ತೊಡಕು ತಲೆದೋರುವ ಸಾಧ್ಯತೆಯಿದ್ದ ಕಾರಣ ಕೈಬಿಡಲಾಯಿತು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ಪ್ರತ್ಯೇಕವಾಗಿ ಶೇ 1ರಷ್ಟು ಒಳ ಮೀಸಲಾತಿ ನೀಡುವಂತೆ ಅಲೆಮಾರಿ ಸಮುದಾಯವರ ಬೇಡಿಕೆಗೆ ಮುಖ್ಯಮಂತ್ರಿಯವರು ನ್ಯಾಯಯುತವಾಗಿ ಸ್ಪಂದಿಸುವರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.