
ಪ್ರಜಾವಾಣಿ ವಾರ್ತೆ
ಬಾಗಲಕೋಟೆ: ಪಾಕಿಸ್ತಾನ ಜಿಂದಾಬಾದ್ ಕೂಗಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮುಖಂಡರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಫೊಲೀಸ್ ವಾಹನ ಏರುವಾಗ ಬಿಜೆಪಿ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ದೇಶಭಕ್ತರನ್ನು ಬಂಧಿಸುತ್ತಿರುವ ಬಿಜೆಪಿ ಸರ್ಕಾರಕ್ಕೆ ಎಂದಾಗ ಉಳಿದವರು ದಿಕ್ಕಾರ.. ದಿಕ್ಕಾರ ಎಂದು ಕೂಗುತ್ತಾರೆ.
ಎರಡನೇ ಬಾರಿಗೂ ಅವರು ಹಾಗೆಯೇ ಹೇಳಿದಾಗ ಇನ್ನೊಬ್ಬರು ಕಾಂಗ್ರೆಸ್ ಸರ್ಕಾರಕ್ಕೆ ಎಂದು ಸೇರಿಸುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.