ADVERTISEMENT

ಭಾರತೀಯ ಸೈನಿಕರಿಗಾಗಿ ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 11 ಮೇ 2025, 16:34 IST
Last Updated 11 ಮೇ 2025, 16:34 IST
ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ರಕ್ತದಾನಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು
ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ರಕ್ತದಾನಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು   

ಮಹಾಲಿಂಗಪುರ: ಭಾರತದ ಗಡಿಯಲ್ಲಿ ಪಾಕಿಸ್ತಾನದ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡಿರುವ ಸೈನಿಕರಿಗೆ ಅಗತ್ಯವಿರುವ ರಕ್ತವನ್ನು ಪೂರೈಸಲು ಸಮೀಪದ ಚಿಮ್ಮಡ ಗ್ರಾಮದಲ್ಲಿ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಮುಧೋಳದ ರಾಮನಗೌಡ ಆಸ್ಪತ್ರೆಯ ರಕ್ತನಿಧಿ ಭಂಡಾರದ ಸಂಚಾರಿ ರಕ್ತದಾನ ಘಟಕದಲ್ಲಿ ರಾಜ್ಯ ರಕ್ತಚಾಲನಾ ಪರಿಷತ್ತು, ತೇರದಾಳ ಕ್ಷೇತ್ರದ ಯೂಥ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ರಕ್ತದಾನ ಮಾಡಿ ಸಾರ್ಥಕತೆ ಮೆರೆದರು.

‘ಪ್ರತಿಯೊಬ್ಬ ರಕ್ತದಾನಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ’ ಎಂದು ಸಮಿತಿ ಅಧ್ಯಕ್ಷ ಪ್ರವೀಣ ಪೂಜಾರಿ ತಿಳಿಸಿದರು.

ADVERTISEMENT

ಉಮೇಶ ಪೂಜಾರಿ, ಸೂರಜ ಅವಟಿ, ಮಾಜಿ ಸೈನಿಕ ಮಹಾಲಿಂಗಪ್ಪ ಬಳಗಾರ, ಅಶೋಕ ಮೋಟಗಿ, ಬಾಳಪ್ಪ ಗಡೆಪ್ಪನವರ, ಶ್ರೀಶೈಲ ಮಠಪತಿ, ಅಶೋಕ ಚಿಮ್ಮಡ, ಪ್ರಭು ದೇವಗೋಳ, ಮಹಾದೇವ ಅಥಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.